ಕುಶಾಲನಗರ, ಸೆ. 21: ವನ್ಯಜೀವಿ ಸಪ್ತಾಹದ ಅಂಗವಾಗಿ ಅಕ್ಟೋಬರ್ 5 ರಂದು ದೊಡ್ಡಳುವಾರದಲ್ಲಿರುವ ವನ್ಯಜೀವಿ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸ ಲಾಗಿದೆ. ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಶೀಟ್ ಮತ್ತು ಬರೆಯುವ ಹಾಳೆಯನ್ನು ವಿತರಿಸಲಾಗುವದು ಹಾಗೂ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸೂಕ್ತ ಬಹುಮಾನ &divound;ೀಡಲಾಗುವದು. ಕುಶಾಲನಗರ ಹೋಬಳಿ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕೆಂದು ಕೋರಲಾಗಿದೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಪ್ತಾಹದಲ್ಲಿ ಭಾಗವಹಿಸಲು ವಿನಂತಿಸಲಾಗಿದೆ. ಹೆಸರು ನೋಂದಾಯಿಸಿಕೊಳ್ಳಲು ಸಂಪರ್ಕಿಸಿ, ಡಾ. ದಿವ್ಯಾ. ವಿ: 9844014063 ಅಥವಾ ಪ್ರಶಾಂತ ಎನ್.ಟಿ. 8762049597.