ಸೋಮವಾರಪೇಟೆ, ಸೆ. 21 : ಸಮಾಜದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯ ದೃಷ್ಟಿಯಿಂದ ಕರ್ನಾಟಕ ರೈತ ಸಂಘದ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ತಾಲೂಕು ದಂಡಾಧಿಕಾರಿಗಳ ಎದುರು ಹಾಜರುಪಡಿಸಿದ ಮೇರೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶ ನೀಡಲಾಗಿದೆ.ಕಳೆದ ತಾ. 18ರಂದು ರಾತ್ರಿ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಡೆದ ಘಟನಾವಳಿಗಳಿಗೆ ಸಂಬಂಧಿಸಿದಂತೆ ನಿನ್ನೆ ದಿನ ಪತ್ರಿಕಾಗೋಷ್ಠಿ ನಡೆಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದ ನಿರ್ವಾಣಪ್ಪ ಅವರನ್ನು ಇಂದು ಬೆಳಗ್ಗೆ ಇಲ್ಲಿನ ಕಕ್ಕೆಹೊಳೆ ಸಮೀಪ ವಶಕ್ಕೆ ತೆಗೆದುಕೊಳ್ಳಲಾಗಿದೆ.

ತಾ. 18ರಂದು ತಹಶೀಲ್ದಾರ್ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಮಧ್ಯೆ ಕರ್ನಾಟಕ ರೈತ ಸಂಘದ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ಅವರು ನಿನ್ನೆ ದಿನ ಪತ್ರಿಕಾಗೋಷ್ಠಿ ನಡೆಸಿ, ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕಕ್ಕೆಹೊಳೆ ಬಳಿ ನಿರ್ವಾಣಪ್ಪ ಅವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು,

(ಮೊದಲ ಪುಟದಿಂದ) ವಿಚಾರಣೆಗೆ ಒಳಪಡಿಸಿದ್ದು, ನಂತರ 107 116(3) ಮತ್ತು ಕಲಂ 151 ಸಿಆರ್‍ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕುಶಾಲನಗರದ ನಾಡ ಕಚೇರಿಯಲ್ಲಿದ್ದ ಪ್ರಭಾರ ತಹಶೀಲ್ದಾರ್ ಗೋವಿಂದರಾಜು ಅವರ ಎದುರು ಹಾಜರುಪಡಿಸಿದ ಮೇರೆ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಪ್ರತಿಭಟನೆಯ ಮುಖಂಡತ್ವ ವಹಿಸಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು (ಮೊದಲ ಪುಟದಿಂದ) ವಿಚಾರಣೆಗೆ ಒಳಪಡಿಸಿದ್ದು, ನಂತರ 107 116(3) ಮತ್ತು ಕಲಂ 151 ಸಿಆರ್‍ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕುಶಾಲನಗರದ ನಾಡ ಕಚೇರಿಯಲ್ಲಿದ್ದ ಪ್ರಭಾರ ತಹಶೀಲ್ದಾರ್ ಗೋವಿಂದರಾಜು ಅವರ ಎದುರು ಹಾಜರುಪಡಿಸಿದ ಮೇರೆ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಪ್ರತಿಭಟನೆಯ ಮುಖಂಡತ್ವ ವಹಿಸಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಪೊಲೀಸ್ ಠಾಣೆಯಲ್ಲಿ 2007ರಲ್ಲಿಯೇ ಇವರ ವಿರುದ್ಧ ರೌಡಿಶೀಟರ್ ತೆರೆಯಲಾಗಿದೆ. ಪೊಲೀಸ್ ಠಾಣಾಧಿಕಾರಿ ಎಂ. ಶಿವಣ್ಣ ಅವರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರತಿಭಟನೆ

ಡಿ.ಎಸ್.ನಿರ್ವಾಣಪ್ಪ ಅವರ ಬಂಧನ ಖಂಡಿಸಿ ವಿವಿಧ ಸಂಘಟನೆಗಳಿಗೆ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟಿಸಿದ ಸಂಘಸಂಸ್ಥೆಗಳ ಪ್ರಮುಖರು ಕೂಡಲೆ ನಿರ್ವಾಣಪ್ಪ ಅವರನ್ನು ಬಂಧಮುಕ್ತ ಗೊಳಿಸಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ನಿರ್ವಾಣಪ್ಪ ಅವರನ್ನು ತಕ್ಷಣ ಬಿಡುಗಡೆಗೊಳಿಸದಿದ್ದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಹೋರಾಟ ನಡೆಸುವದಾಗಿ ಸಂಘಟನೆಗಳ ಪ್ರಮುಖರು ಎಚ್ಚರಿಸಿದ್ದಾರೆ. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್, ಕಾಂಗ್ರೆಸ್, ಎಸ್‍ಡಿಪಿಐ, ರೈತ ಸಂಘ, ಡಿಎಸ್‍ಎಸ್ ಸಂಘಟನೆಗಳ ಪ್ರಮುಖರಾದ ಅಬ್ದುಲ್, ರಾಜು, ಸಲೀಂ, ಶಂಷೀರ್, ಮಂಜುನಾಥ, ಕೆ.ಟಿ. ಆನಂದ, ಸಣ್ಣಪ್ಪ, ಜಾಗೃತಿ ಮಹಿಳಾ ಅಧ್ಯಕ್ಷೆ ಅಶ್ವಿನಿ ಕೃಷ್ಣಕಾಂತ್, ಸುಶೀಲ ಹಾನಗಲ್, ಆಬಿದ್, ನಿರ್ವಾಣಪ್ಪ ಅವರ ಪತ್ನಿ ವನಜಾಕ್ಷಿ, ಸಂತ್ರಸ್ತ ಕೇಂದ್ರದ ಪ್ರತಿನಿಧಿಗಳು ಇದ್ದರು.