ಸೋಮವಾರಪೇಟೆ, ಸೆ. 21: ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಆಡಳಿತ ಮಂಡಳಿಯ ಪದಗ್ರಹಣ ಮತ್ತು ಪತ್ರಿಕೋದ್ಯಮ-ಸಮಾಜ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮ ತಾ. 22ರಂದು (ಇಂದು) ಪೂರ್ವಾಹ್ನ 10.30ಕ್ಕೆ ಇಲ್ಲಿನ ಪತ್ರಿಕಾಭವನದಲ್ಲಿ ನಡೆಯಲಿದೆ.

ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಕವನ್ ಕಾರ್ಯಪ್ಪ ವಹಿಸಲಿದ್ದು, ಚಿಕ್ಕ ಅಳುವಾರ ಜ್ಞಾನಕಾವೇರಿ ಸ್ನಾತಕ್ಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕ ಜಮೀರ್ ಅಹ್ಮದ್ ಅವರು ಪತ್ರಿಕೋದ್ಯಮ-ಸಮಾಜ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

12 ಗಂಟೆಗೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ನೂತನ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಆರ್. ಹರೀಶ್ ಅವರಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ. ಕಾರ್ಯಕ್ರಮದಲ್ಲಿ ಉದ್ಯಮಿ ಹರಪಳ್ಳಿ ರವೀಂದ್ರ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ರಾಜ್ಯ ಸಮಿತಿ ಸದಸ್ಯ ರಮೇಶ್ ಕುಟ್ಟಪ್ಪ, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಎ. ಮುರಳೀಧರ್, ಜಿಲ್ಲಾ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್. ಮಹೇಶ್ ಅವರುಗಳು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಪತ್ರಿಕಾ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದ ಪತ್ರಕರ್ತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಬಿ.ಎ. ಭಾಸ್ಕರ್ ತಿಳಿಸಿದ್ದಾರೆ.