ಗುಡ್ಡೆಹೊಸೂರು, ಸೆ. 21: ಇಲ್ಲಿನ ಬೊಳ್ಳೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತೀಷ್ಠಾಪಿಸಿದ ಗಣೇಶ ಮೂರ್ತಿಯ ವಿಸರ್ಜನೆ ನಡೆಯಿತು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಗಣಪತಿ ಸೇವಾ ಸಮಿತಿಯ ಸದಸ್ಯರು ಹಾಜರಿದ್ದರು.