ನಾಪೆÇೀಕ್ಲು, ಸೆ. 21: ವಿದ್ಯಾರ್ಥಿಗಳು ಪಠ್ಯದೊಂದಿಗೆ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವದರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳ ಅನಾವರಣಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಹೇಳಿದರು.

ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಪೆÇೀಕ್ಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಳ್ಳುವದರಿಂದ ವಿದ್ಯಾರ್ಥಿಗಳ ನಡುವೆ ಪರಸ್ಪರ ಸ್ನೇಹ-ಸೌಹಾರ್ದ ವೃದ್ಧಿಯಾಗಲಿದೆ ಎಂದರು. ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ವಹಿಸಿದ್ದರು. ವೇದಿಕೆಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ಮೆಹಬೂಬ್ ಸಾಬ್, ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಗಣಿತ ಶಿಕ್ಷಕ ಸಿ.ಎಸ್. ಸುರೇಶ್, ತಾಲೂಕು ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಆರ್. ಸುಬ್ರಮಣಿ, ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸುರೇಶ್ ಇದ್ದರು.

ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ನಾಪೆÇೀಕ್ಲು ಕ್ಲಸ್ಟರ್‍ಗೆ ಒಳಪಟ್ಟ 21 ಶಾಲೆಗಳ ವಿದ್ಯಾರ್ಥಿಗಳು, ಸಂಬಂಧಿಸಿದ ಶಿಕ್ಷಕರು ಪಾಲ್ಗೊಂಡಿದ್ದರು. ಸೋಮವಾರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸ್ಪರ್ಧೆ ನಡೆದರೆ ಮಂಗಳವಾರ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯಿತು. ಸಿಆರ್‍ಪಿ ಮಾದೇಶ್ ಅವರ ನೇತೃತ್ವದಲ್ಲಿ ಸ್ಪರ್ಧೆಗಳು ಜರುಗಿದವು. ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. - ದುಗ್ಗಳ