ಗೋಣಿಕೊಪ್ಪ ವರದಿ, ಸೆ. 21: ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಗಳು ತಿತಿಮತಿ ಅರಣ್ಯದಲ್ಲಿ ವನಸಿರಿ ಕಾರ್ಯಕ್ರಮದಡಿ 300 ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಕೊಡವ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸಿ.ಪಿ. ಬೆಳ್ಳಿಯಪ್ಪ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೆಷನ್ ವಿಭಾಗದ 130 ವಿದ್ಯಾರ್ಥಿಗಳು ತೊಡಗಿಸಿಕೊಂಡರು. ಮತ್ತಿ, ಹಲಸು, ಮಹಾಗನಿ ಹಾಗೂ ಹೊಂಗೆ ಸೇರಿದಂತೆ ವಿವಿಧ ಜಾತಿಯ 300 ಸಸಿಗಳನ್ನು ನೆಡಲಾಯಿತು. ಸಸಿ ನಡುವ ಕಾರ್ಯಕ್ಕೆ ತಿತಿಮತಿ ರ್ಯಾಪಿಡ್ ರೆಸ್ಪಾನ್ಸ್ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮಾರ್ಗದರ್ಶನ ನೀಡಿ ನೆರವಾದರು. ತಿತಿಮತಿ ಎಸಿಎಫ್ ಶ್ರೀಪತಿ, ಕೊಡವ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಎಂ.ಸಿ ಕಾರ್ಯಪ್ಪ, ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲೆ ಪಿ.ಸಿ. ಕವಿತಾ, ಕೂರ್ಗ್ ಇನ್ಸ್ಟಿಟ್ಯೂಟ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಸಣ್ಣುವಂಡ ರೋಹಿಣಿ ತಿಮ್ಮಯ್ಯ, ಪೊನ್ನಂಪೇಟೆ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಬಿಜು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೆಷನ್ ವಿಭಾಗದ ಮುಖ್ಯಸ್ಥ ದಿವಾಕರ್ ಇದ್ದರು.