*ಗೋಣಿಕೊಪ್ಪಲು, ಸೆ. 21: ತಿತಿಮತಿ ಗ್ರಾಮ ಪಂಚಾಯಿತಿ ಸಮುದಾಯ ಭವನದ ಭೋಜನಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

2107-18ನೇ ಸಾಲಿನ 14ನೇ ಹಣಕಾಸು ಯೋಜನೆಯ ರೂ. 4 ಲಕ್ಷ ವೆಚ್ಚದ ಕಟ್ಟಡ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಶಿವಕುಮಾರ್ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ.ಆರ್. ಪಂಕಜಾ, ತಾಲೂಕು ಪಂಚಾಯಿತಿ ಸದಸ್ಯೆ ಆಶಾಜೇಮ್ಸ್, ಹಿರಿಯರಾದ ಶರಣುಪಿಳ್ಳೆ, ಗ್ರಾಮ ಪಂಚಾಯಿತಿ ಸದಸ್ಯ ಎನ್.ಎನ್. ಅನೂಪ್ ಹಾಜರಿದ್ದರು.