*ಗೋಣಿಕೊಪ್ಪಲು, ಸೆ. 21: ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವೆನೆಯಿಂದ ದೂರವಿದ್ದು ಉತ್ತಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಇಲ್ಲಿನ ಸಿಪಿಐ ಸಿ.ಎನ್. ದಿವಾಕರ್ ಹೇಳಿದರು.

ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಈಚಿಗೆ ನಡೆದ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು ದುಶ್ಚಟಗಳಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಪೊನ್ನಂಪೇಟೆ ಸಬ್‍ಇನ್ಸ್‍ಪೆಕ್ಟರ್ ಮಹೇಶ್ ಮಾತನಾಡಿ, ಮಾನಸಿಕ ನಿಯಂತ್ರಣವನ್ನು ಕಳೆದುಕೊಳ್ಳುವ ವಸ್ತುಗಳಿಂದ ಅಂತರ ಕಾಯ್ದುಕೊಳ್ಳಬೇಕು. ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಸದೃಢತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಸಿಬ್ಬಂದಿಗಳಾದ ಎನ್.ಡಿ. ಸುಬ್ರಮಣಿ, ಎನ್.ಪಿ. ನವೀನ್, ಪ್ರಾಂಶುಪಾಲೆ ಕೆ.ಪಿ. ಪೊನ್ನಮ್ಮ, ಮುಖ್ಯ ಶಿಕ್ಷಕ ಚಂದ್ರಶೇಖರ್, ಉಪನ್ಯಾಸಕರಾದ ಎನ್.ಕೆ. ಪ್ರಭು, ಸುಬ್ಬಯ್ಯ, ಬೆನಡಿಕ್ಟ ಫರ್ನಾಂಡೀಸ್ ಹಾಜರಿದ್ದರು.