ವೀರಾಜಪೇಟೆ, ಸೆ. 26: ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಉತ್ತಮ ವೇದಿಕೆ ಎಂದು ಕೊಡಗು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹೇಳಿದರು.
ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣಾ ಇಲಾಖೆ ವತಿಯಿಂದ ತ್ರಿವೇಣಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿ ಸಿಗುವ ಅವಕಾಶವನ್ನು ಉತ್ತಮ ರೀತಿಯಲ್ಲಿ ಸದ್ಭಳಕೆ ಮಾಡಿಕೊಂಡಾಗ ಒಳ್ಳೆಯ ಫಲಿತಾಂಶವನ್ನು ಪಡೆದುಕೊಳ್ಳ ಬಹುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ ಇಂದಿನ ವೈಜ್ಞಾನಿಕ ಯುಗದಲ್ಲಿ ವಿದ್ಯಾಭ್ಯಾಸದಲ್ಲಿ ಫಲಿತಾಂಶವೇ ಮುಖ್ಯವಾಗಿದೆ. ಮನಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕಾದರೆ ಮನರಂಜನೆಗೂ ಒತ್ತು ನೀಡಬೇಕು ಎಂದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲಿರ ಚಲನ್ ಅಧ್ಯಕ್ಷತೆ ವಹಿಸಿದ್ದು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತ್ ಸದಸ್ಯೆ ಭವ್ಯ ಚಿಟ್ಟಿಯಣ್ಣ, ತಾಲೂಕು ಪಂಚಾಯಿತಿ ಸದಸ್ಯೆ ಆಲತಂಡ ಸೀತಮ್ಮ, ತ್ರೀವೇಣಿ ಶಾಲಾ ಅಧ್ಯಕ್ಷ ಸಿ.ಎಂ. ನಾಣಯ್ಯ, ಕ್ಷೇತ್ರ ಶೀಕ್ಷಣಾಧಿಕಾರಿ ಲೋಕೇಶ್, ಮೈಸೂರು ಕಾವೇರಿ ಬಳಗ ಮತ್ತು ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಬನ್ನೂರು ಕೆ ರಾಜು, ಉಪಸ್ಥಿತರಿದ್ದರು.
ಇದೇ ಸಂದÀರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಿತಿಮತಿ ಪ್ರೌಢಶಾಲೆಯ ಎಸ್. ರೋಹನ್ ಕುಮಾರ್, ದರ್ಶನ್ ಕೆ.ಎಂ., ಗೋಣಿಕೊಪ್ಪ ಶಾಲೆಯ ಇಂದು, ಹೆಗ್ಗಳ ಶಾಲೆಯ ಎ.ಎಸ್ ಶಿಲ್ಪಾ, ಸೌಂದರ್ಯ ಅವರುಗಳನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸ್ವಾಗತಿಸಿದರು. ಕುಶಾಲಪ್ಪ, ಕರುಂಬಯ್ಯ, ವಾಮನಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕ ಉತ್ತಪ್ಪ ವಂದಿಸಿದರು.