ಸೋಮವಾರಪೇಟೆ, ಸೆ.26: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲೂಕು ಸಮಗ್ರ ಶಿಕ್ಷಾ ಅಭಿಯಾನದ ಸಂಯುಕ್ರ ಆಶ್ರಯದಲ್ಲಿ ತಾ. 27ರಂದು (ಇಂದು) ಇಲ್ಲಿನ ಓಎಲ್‍ವಿ ಕಾನ್ವೆಂಟ್‍ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳು ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ತಿಳಿಸಿದ್ದಾರೆ.

ಬೆಳ್ಳಿಗೆ 9.30ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದು, ಜಿ. ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ. ಪಂ. ಸದಸ್ಯ ಬಿ.ಜೆ. ದೀಪಕ್, ತಾ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಎಚ್.ಎನ್. ತಂಗಮ್ಮ, ಹಾನಗಲ್ಲು ಗ್ರಾ. ಪಂ. ಅಧ್ಯಕ್ಷೆ ಬಿ.ಇ. ರೇಣುಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಲ್ಟರ್ ಹಿಲರಿ ಡಿ’ಮೆಲ್ಲೋ, ತಾ. ಪಂ. ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಸುನಿಲ್ ಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಮತ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸೆರಿನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.