ಮಡಿಕೇರಿ, ಸೆ. 26: ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಉತ್ತಮ ವೇದಿಕೆಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಜೋಸೇಫರ ಶಾಲೆಯಲ್ಲಿ ನಡೆದ ಮಡಿಕೇರಿ ತಾಲೂಕು ಪ್ರಾಥಮಿಕ
ಮಡಿಕೇರಿ, ಸೆ. 26: ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಉತ್ತಮ ವೇದಿಕೆಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಜೋಸೇಫರ ಶಾಲೆಯಲ್ಲಿ ನಡೆದ ಮಡಿಕೇರಿ ತಾಲೂಕು ಪ್ರಾಥಮಿಕ ಹೊರತರಲು ಇಂತಹ ಕಾರ್ಯಕ್ರಮ ಗಳು ಅವಕಾಶ ಒದಗಿಸಲಿದೆ. ಆ ನಿಟ್ಟಿನಲ್ಲಿ ಇರುವ ಅವಕಾಶವನ್ನು ಬಳಸಿಕೊಂಡು ಶಿಕ್ಷಣ, ಕ್ರೀಡೆ, ಸಾಂಸ್ಕøತಿಕ, ಸಾಹಿತ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿ ಕೊಳ್ಳುವಂತಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಮಾತನಾಡಿ, ಮಕ್ಕಳಲ್ಲಿರುವ ಸಾಂಸ್ಕøತಿಕ ಪ್ರತಿಭೆಯನ್ನು ಅನಾವರಣಗೊಳಿಸಲು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮ ಒಂದು ಅವಕಾಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಕೆ.ವಿ. ರಾಮಚಂದ್ರ, ಕ.ರಾ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಪಿ.ಎಸ್. ಜನಾರ್ಧನ, ಅನುದಾನಿತ ಪ್ರೌ.ಶಾ.ಸ.ಶಿ. ಸಂಘದ ಅಧ್ಯಕ್ಷರಾದ ವಿಲ್ಫ್ರೇಡ್ ಕ್ರಾಸ್ತಾ, ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ನಾಗಯ್ಯ ಶೆಟ್ಟಿ, ಸಂತ ಜೋಸೇಫರ ಶಾಲೆಯ ಮುಖ್ಯೋಪಾಧ್ಯಾಯರಾದ ರೋಝಾ ಮೆಂಡೋಜ್ನಾ ಇತರರು ಇದ್ದರು.