ಮಡಿಕೇರಿ, ಅ. 1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯು ತಾ. 2 ರಂದು (ಇಂದು) ಬೆಳಗ್ಗೆ 10 ಗಂಟೆಗೆ ನಗರದ ಮೈತ್ರಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ನಗರಸಭೆ ಅಧ್ಯಕ್ಷರು, ಸರ್ವೋದಯ ಸಮಿತಿ ಜಿಲ್ಲಾ ಅಧ್ಯಕ್ಷರು, ಜಿಲ್ಲಾಧಿಕಾರಿಯವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ.ಸಿಇಒ ಇತರರು ಪಾಲ್ಗೊಳ್ಳಲಿದ್ದಾರೆ.
ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಇಲಾಖೆಯಿಂದ ಹೊರತಂದಿರುವ ವಿಶೇಷಾಂಕ ಬಿಡುಗಡೆ ನಡೆಯಲಿದೆ.