ಮಡಿಕೇರಿ, ಸೆ. 30: ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕೊಡಗಿನ ಗ್ರಾಮೀಣ ಪ್ರದೇಶಗಳ ಟೈಲರ್ಗಳಿಗೆ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಶನ್ ಸಹಾಯ ಹಸ್ತ ಚಾಚಲು ಮುಂದಾಗಿದೆ.
ಅ. 2 ರಂದು ನಗರದ ಕೂರ್ಗ್ ಕಮ್ಯೂನಿಟಿ ಹಾಲ್ ನಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿತ ‘ನಮ್ಮಿಂದ ನಮ್ಮವರಿಗಾಗಿ’ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ವೀಣಾ ಅಚ್ಚಯ್ಯ, ರಾಜ್ಯ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎಸ್.ಆನಂದ್, ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ವಸಂತ್ ಕುಲಾಲ್, ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ವಸಂತ್, ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ನಂದೀಶ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅದ್ಯಕ್ಷ ಪ್ರಜ್ವಲ್ ಕುಮಾರ್, ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕೆ. ರಾಮಚಂದ್ರ ಸೇರಿದಂತೆ ಟೈಲರ್ಸ್ ಅಸೋಸಿಯೇಷನ್ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಸಂತ್ರಸ್ತರಾದ ಸುಮಾರು 31ಟೈಲರ್ಗಳಿಗೆ ಸಹಾಯ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.