ಮಡಿಕೇರಿ, ಅ. 1: ಪ್ರೌಢಶಾಲಾ ಸಹಶಿಕ್ಷಕರ ಸಮಸ್ಯೆಗಳನ್ನು ಬಗೆಹರಿ ಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ವೇತನ ತಾರತಮ್ಯ, ವಿಶೇಷ ಭತ್ಯೆ, ವರ್ಗಾವಣೆ ಪ್ರಕ್ರಿಯೆ ಯಲ್ಲಿನ ನೂನ್ಯತೆ ಸರಿಪಡಿಸುವದು ಸೇರಿದಂತೆ 15 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ಕಾರ್ಯದರ್ಶಿ ಹೆಚ್.ಜಿ. ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.