ಮಡಿಕೇರಿ, ಅ. 6: ತಾ. 10 ರಿಂದ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ದತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾ. 8 ರಂದು (ನಾಳೆ) ಮಧ್ಯಾಹ್ನ 3 ಗಂಟೆಗೆ ನಗರದ ನಗರಸಭೆಯ ಕಾವೇರಿ ಕಲಾಕ್ಷೇತ್ರ ಸಭಾಂಗಣದಲ್ಲಿ ದಸರಾ ಆಚರಣೆಯ ಪೂರ್ವಭಾವಿ ಸಭೆ ನಡೆಯಲಿದೆ ಎಂದು ನಗರ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದ್ದಾರೆ.