ಮಡಿಕೇರಿ, ಅ. 6: ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ತಾ. 10 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವದು ಎಂದು ನಗರ ದಸರಾ ಸಮಿತಿ ಹಾಗೂ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದ್ದಾರೆ.