ಮಡಿಕೇರಿ, ಅ. 6: ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ತಾ. 8 ರಂದು (ನಾಳೆ) ಜಿಲ್ಲೆಗೆ ಆಗಮಿಸಲಿದ್ದಾರೆ.
ತಾ. 8 ರಂದು ಮಧ್ಯಾಹ್ನ 12 ಗಂಟೆಗೆ ತಲಕಾವೇರಿಯ ಅನ್ನಛತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆ ಸಂಬಂಧ ನಡೆಯುವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಡಿಕೇರಿ ದಸರಾ ಸಂಬಂಧವಾಗಿ ನಡೆಯುವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.