ಮಡಿಕೇರಿ, ಅ. 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಹಾಕಿ ಪಂದ್ಯಾವಳಿ ಉದ್ಘಾಟನಾ ಸಮಾರಂಭ ತಾ. 13 ರಂದು (ಇಂದು) ಸಂಜೆ 4 ಗಂಟೆಗೆ ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ನಡೆಯಲಿದೆ.