ಮಡಿಕೇರಿ, ಅ. 13: ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದು, ಇತ್ತೀಚೆಗೆ ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಬೆಂಗಳೂರಿಗೆ ನಿಯೋಜಿಸಲಾಗಿದೆ. ಇದೀಗ ಅವರು ಪಂಚಾಯತ್ ಇಲಾಖೆಯ ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರ ಕಾರ್ಯವ್ಯಾಪ್ತಿಗೆ ಎಲ್ಲಾ ಜಿಲ್ಲೆಗಳೂ ಒಳಪಡಲಿವೆ.