ಮಡಿಕೇರಿ, ಅ. 13 : ಐತಿಹಾಸಿಕ ಮೈಸೂರು ದಸರಾ ಉತ್ಸವದ ಅಂಗವಾಗಿ ನಡೆದ ಚೀಫ್ ಮಿನಿಸ್ಟರ್ ಕಪ್ ಟೆಕ್ವಾಂಡೋ ಚಾಂಪಿಯನ್ ಶಿಪ್‍ನಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿ ಸಾಕಿರ್ ಉತ್ತಮ ಪ್ರದರ್ಶನದ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಯುವ ಸಬಲೀಕರಣ ಮತ್ತು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್‍ನ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ಟೆಕ್ವಾಂಡೋ ಚಾಂಪಿಯನ್ ಶಿಪ್ ನಡೆಯಿತು.

ಕಂಚಿನ ಪದಕ ವಿಜೇತ ಸಾಕಿರ್ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮರ್ಕರ ಟೆಕ್ವಾಂಡೋ ಕ್ಲಬ್‍ನ ತರಬೇತುದಾರ ಕುಶಾಲ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.