ಮೂರ್ನಾಡು, ಅ. 13: ಮೂರ್ನಾಡು ಪ್ರೌಢಶಾಲೆಗೆ ವೀರಾಜಪೇಟೆ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ ಉಪ ಅಭಿಯಂತರ ಕೆ.ಎಂ.ದಿಲೀಪ್ ದತ್ತಿ ನಿಧಿಯನ್ನು ನೀಡಿದರು. ಮೂರ್ನಾಡು ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ದಿಲೀಪ್ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಅವರಿಗೆ ರೂ. 12000 ದತ್ತಿ ನಿಧಿ ಚೆಕ್ಕನ್ನು ಹಸ್ತಾಂತರಿಸಿದರು. ಇದೆ ಸಂದರ್ಭದಲ್ಲಿ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್‍ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ರಾಜಿಕ್ ಮತ್ತು ಶಾಹಿದ್‍ಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು ಮತ್ತು ಗೋಣಿಕೊಪ್ಪಲುವಿನ ಲಯನ್ಸ್ ಶಾಲೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಬಿ.ಎಲ್. ಪೂಜಾ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕ ನೀಡಲಾಯಿತು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚೌರೀರ ಪೆಮ್ಮಯ್ಯ, ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಖಜಾಂಚಿ ಬಡುವಂಡ ಸುಬ್ರಮಣಿ, ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ ಮತ್ತು ಶಿಕ್ಷಕರು ಹಾಜರಿದ್ದರು.