*ಗೋಣಿಕೊಪ್ಪ, ಅ. 12: ರೂ. 3 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾವೇರಿ ಕಾಲೇಜು ತಡೆಗೋಡೆ, ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಶಾಸಕರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ತಡೆಗೋಡೆಗೆ ಮತ್ತಷ್ಟು ಅನುದಾನ ನೀಡುವ ಮೂಲಕ ತಡೆಗೋಡೆಯನ್ನು ಪೂರ್ಣವಾಗಿ ನೆರವೇರಿಸಲಾಗುವದು ಎಂದು ಈ ಸಂದರ್ಭ ಶಾಸಕರು ಭರವಸೆ ನೀಡಿದರು. ಜಿ.ಪಂ. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ನಿವೃತ್ತ ಪ್ರಾಂಶುಪಾಲ ಪ್ರೊ. ಇಟ್ಟೀರ ಕೆ. ಬಿದ್ದಪ್ಪ, ಅಧ್ಯಕ್ಷ ಡಾ. ಎ.ಸಿ. ಗಣಪತಿ ಗುತ್ತಿಗೆದಾರ ಆರುಮುರುಗ ಹಾಜರಿದ್ದರು.