ಮಡಿಕೇರಿ, ಅ. 12 : ಆರೋಗ್ಯ ಕರ್ನಾಟಕ ಕಾರ್ಡ್ ಇಲ್ಲವೆಂದು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಹಾಗೂ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಜಗದೀಶ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಸದ್ಯದಲ್ಲೇ ವಿತರಿಸಲಾಗುವದು. ಅಲ್ಲಿಯವರೆಗೆ ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯಡಿ 14 ಮಂದಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಚಿಕಿತ್ಸೆ ನೀಡಲಾಗುವದು. ಎಪಿಎಲ್ ಪಡಿತರ ಚೀಟಿದಾರರಿಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚ ಭರಿಸಲಾಗುವದು ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಜಗದೀಶ್ ಮಾಹಿತಿ ನೀಡಿದರು.

ಸರ್ಕಾರಿ ಮತ್ತು ಆಸಕ್ತ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ನೋಡಲ್ ಅಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ

ಮಡಿಕೇರಿ, ಅ. 12 : ಆರೋಗ್ಯ ಕರ್ನಾಟಕ ಕಾರ್ಡ್ ಇಲ್ಲವೆಂದು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಹಾಗೂ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಜಗದೀಶ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಸದ್ಯದಲ್ಲೇ ವಿತರಿಸಲಾಗುವದು. ಅಲ್ಲಿಯವರೆಗೆ ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯಡಿ 14 ಮಂದಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಚಿಕಿತ್ಸೆ ನೀಡಲಾಗುವದು. ಎಪಿಎಲ್ ಪಡಿತರ ಚೀಟಿದಾರರಿಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚ ಭರಿಸಲಾಗುವದು ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಜಗದೀಶ್ ಮಾಹಿತಿ ನೀಡಿದರು.

ಸರ್ಕಾರಿ ಮತ್ತು ಆಸಕ್ತ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ನೋಡಲ್ ಅಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದರು.

ಆರೋಗ್ಯ ಶಿಬಿರಗಳು : 2018 ಜುಲೈ ರಿಂದ ಸೆಪ್ಟೆಂಬರ್ ಅಂತ್ಯದವರೆಗೆ 6 ಆರೋಗ್ಯ ಶಿಬಿರಗಳನ್ನು ಇಲಾಖೆಯ ಎನ್.ಸಿ.ಡಿ. ಘಟಕದ ಸಹಕಾರದೊಂದಿಗೆ ನಡೆಸಲಾಗಿದ್ದು, ಈವರೆಗೆ 6 ಜನ ದ್ವಿತೀಯ ಹಂತದ ಕಾಯಿಲೆಗಳ ಚಿಕಿತ್ಸೆಗೆ ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹತ್ತಿರದ ಜಿಲ್ಲಾ ಆಸ್ಪತ್ರೆಗೆ ರೆಫರ್ ಮಾಡಲಾಗಿದೆ.

2018 ರ ಮಾರ್ಚ್ ರಿಂದ ಸೆಪ್ಟೆಂಬರ್ ಅಂತ್ಯದವರೆಗೆ ಜಿಲ್ಲೆಯ ಒಟ್ಟು 54 ಫಲಾನುಭವಿಗಳು ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆದಿದ್ದು, ಒಟ್ಟು ಖರ್ಚಾದ ಮೊತ್ತ ರೂ.22,40,799 ಆಗಿದೆ. ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಾರ್ಯನಿರತ ವೈದ್ಯರಿಗೆ ಆರೋಗ್ಯ ಕರ್ನಾಟಕ ಯೋಜನೆಯ ಸಂಪೂರ್ಣ ವಿವರಗಳನ್ನು ಒಳಗೊಂಡ 157 ಪುಟಗಳ 45 ಕೈಪಿಡಿಗಳನ್ನು ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಅರಿವು ಕಾರ್ಯಕ್ರಮ: ಸಹಕಾರ ಸಂಘದ ಕಾರ್ಯದರ್ಶಿಗಳಿಗೆ ಮತ್ತು ಸದಸ್ಯರಿಗೆ, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳಿಗೆ ಮತ್ತು ಸದಸ್ಯರಿಗೆ, 100 ಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಕ್ಷೇತ್ರ ಆರೋಗ್ಯ ಮಿತ್ರ ಮತ್ತು ಇಲಾಖೆಯ ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲಾಗಿದೆ. ಆರೋಗ್ಯ ಇಲಾಖೆಯ ಕ್ಷೇತ್ರ ಕಾರ್ಯಕರ್ತರಾದ ಆಶಾ, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ಇತರರಿಗೆ ಮಾಹಿತಿಯನ್ನು ಒದಗಿಸಲಾಗಿದೆ. ಕೊಡಗು ಜಿಲ್ಲೆಯಿಂದ ಇದುವರೆಗೂ 346 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ನೆಟ್‍ವರ್ಕ್ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿವರಿಸಿದರು. (ಸಹಾಯವಾಣಿ ಸಂಖ್ಯೆ :1800-425-8330/104)

ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಕಾರ್ಯಪ್ಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಸುವರ್ಣ ಆರೋಗ್ಯ ಕರ್ನಾಟಕದ ಜಿಲ್ಲಾ ಸಮನ್ವಯಾಧಿಕಾರಿ ತೇಜಸ್ ಇತರರು ಇದ್ದರು.