ಮಡಿಕೇರಿ, ಅ. 12: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆ ತಾ. 13 ರಂದು (ಇಂದು) ಮಧ್ಯಾಹ್ನ 2 ಗಂಟೆಗೆ ನಾಪೋಕ್ಲು ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳನ್ನು, ಅಧಿಕಾರಿಗಳನ್ನು ಹಾಗೂ ಕನ್ನಡಾಭಿಮಾನಿಗಳನ್ನು ಪೂರ್ವಭಾವಿ ಸಭೆಗೆ ಆಹ್ವಾನಿಸಲಾಗುತ್ತಿದ್ದು, ಐದು ನಿಮಿಷ ಮುಂಚಿತವಾಗಿ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್ ತಿಳಿಸಿದ್ದಾರೆ.