ಮಡಿಕೇರಿ, ಅ.12: ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕರಾಗಿ ಪಿ.ಎಸ್.ಮಚ್ಚಾಡೋ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ಶಿವಮೊಗ್ಗ ಜಿಲ್ಲೆಯ ಡಿಡಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಮಚ್ಚಾಡೋ ಅವರು ಡಿಡಿಪಿಐ ಕಚೇರಿಯಲ್ಲಿ ಪ್ರಬಾರ ಹುದ್ದೆಯಲ್ಲಿದ್ದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರೂ ಆದ ಉಪ ನಿರ್ದೇಶಕ (ಅಭಿವೃದ್ಧಿ) ವಾಲ್ಟರ್ ಡಿ’ಮೆಲ್ಲೊ ಅವರಿಂದ ಅಧಿಕಾರ ಸ್ವೀಕರಿಸಿದರು.
ಮಚ್ಚಾಡೋ ಅವರು ಈ ಹಿಂದೆ ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಮಂಗಳೂರಿನ ಶಿಕ್ಷಣ ಶಿಕ್ಷಕ ತರಬೇತಿ ಕೇಂದ್ರದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುವ ಸಂದರ್ಭ ಮುಂಬಡ್ತಿ ಹೊಂದಿ ಶಿವಮೊಗ್ಗ ಜಿಲ್ಲೆಯಲ್ಲಿ ಡಿಡಿಪಿಐ ಆಗಿ 2 ವರ್ಷ ಸೇವೆ ಸಲ್ಲಿಸಿರುತ್ತಾರೆ. ಇದಕ್ಕೂ ಮೊದಲು ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಉಪ ಪ್ರಾಂಶುಪಾಲರಾಗಿ, ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಡಿಕೇರಿ ಡಿಡಿಪಿಐ ಕಚೇರಿಯಲ್ಲಿ ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಉಪ ಸಮನ್ವಯಧಿಕಾರಿ ಹಾಗೂ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.