ಸಿದ್ದಾಪುರ, ಅ. 13: ನಾಯಿಗೂಡನ್ನು ಸ್ವಚ್ಛಗೊಳಿಸಿಲ್ಲ ಎಂಬ ಆರೋಪದಡಿಯಲ್ಲಿ ಮಾಲೀಕನೋರ್ವ ಮನೆಯ ಕೆಲಸದಾಕೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಬೆಟ್ಟದ ನಿವಾಸಿಯಾಗಿರುವ ವಿನ್ಸೆಂಟ್ ಎಂಬವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಸಿದ್ದಾಪುರ, ಅ. 13: ನಾಯಿಗೂಡನ್ನು ಸ್ವಚ್ಛಗೊಳಿಸಿಲ್ಲ ಎಂಬ ಆರೋಪದಡಿಯಲ್ಲಿ ಮಾಲೀಕನೋರ್ವ ಮನೆಯ ಕೆಲಸದಾಕೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಬೆಟ್ಟದ ನಿವಾಸಿಯಾಗಿರುವ ವಿನ್ಸೆಂಟ್ ಎಂಬವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ (ಮೊದಲ ಪುಟದಿಂದ) ಆಯಿಷಾ ಅವರ ಕೈಗೆ ನೋವುಂಟಾಗಿದ್ದು, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸಿದ್ದಾಪುರ ಪೊಲೀಸರು ದೂರು ದಾಖಲಿಸಿಕೊಂಡು ವಿನ್ಸೆಂಟ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ.