ಮಡಿಕೇರಿ, ಅ. 13: ಕೊಡಗು ಜಿಲ್ಲೆಯು ಪ್ರಕೃತಿ ಸೌಂದರ್ಯದ ನೆಲೆಬೀಡಾಗಿದ್ದು, ಪ್ರಕೃತಿ ಸೌಂದರ್ಯವನ್ನು ಮತ್ತು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಿಂದ ಮಡಿಕೇರಿ ನಗರದ ಸುತ್ತಮುತ್ತ ಹಾಗೂ ಜಿಲ್ಲೆಯ ಹಲವೆಡೆ ಪ್ರವಾಹ ಮತ್ತು ಭೂಕುಸಿತದಿಂದ ಮಾನವ, ಜಾನುವಾರು ಜೀವಹಾನಿ, ಮನೆ ಹಾನಿ, ರಸ್ತೆ ಹಾನಿ ಸೇರಿದಂತೆ ಹಲವು ನಷ್ಟಗಳು ಆಗಿವೆ. ಪ್ರಸ್ತುತ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಪರಿಹಾರ ವಿತರಣೆ, ಮೂಲ ಸೌಲಭ್ಯ ಕಲ್ಪಿಸುವಿಕೆ, ಪುನರ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುತ್ತದೆ.

ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ, ಮಾಂದಲಪಟ್ಟಿ ಮತ್ತು ತಂಡಿಯಂಡಮೋಳ್ ಪ್ರವಾಸಿತಾಣ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಪೂರ್ಣವಾಗಿ ದುರಸ್ತಿಗೊಳ್ಳದೇ ಇರುವದರಿಂದ ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರು ಈ ಸ್ಥಳಗಳಿಗೆ ತೆರಳದಂತೆ ಈ ಹಿಂದೆ ಕೋರಲಾಗಿತ್ತು.

ತದನಂತರ ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ ಸಂಪರ್ಕ ರಸ್ತೆಯ ತುರ್ತು ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಪೂರ್ಣ ಗೊಳಿಸಲಾಗಿದೆ. ಲಘು ವಾಹನ ಸಂಚಾರಯೋಗ್ಯ ರಸ್ತೆಯನ್ನು ನಿರ್ಮಿಸಲಾಗಿರುವದರಿಂದ ಅಬ್ಬಿ ಜಲಪಾತ ವೀಕ್ಷಣೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಲಘು ವಾಹನಗಳ ಮೂಲಕ ತೆರಳಲು ಅವಕಾಶ ಕಲ್ಪಿಸಲಾಗಿದೆ.

ಪ್ರಸ್ತುತ, ಮಡಿಕೇರಿ ತಾಲೂಕಿನ ಕೆ. ನಿಡುಗಣೆ, ಹೆಬ್ಬೆಟ್ಟಗೇರಿ, ದೇವಸ್ತೂರು,

(ಮೊದಲ ಪುಟದಿಂದ) ಮಾಂದಲಪಟ್ಟಿ ರಸ್ತೆಯ ತಾತ್ಕಾಲಿಕ ದುರಸ್ತಿ ಕಾರ್ಯವನ್ನು ಸಂಬಂಧಪಟ್ಟ ಇಲಾಖೆಯಿಂದ ಕೈಗೊಂಡು ಪೂರ್ಣಗೊಳಿಸಲಾಗಿದೆ. ತಾ. 13 ರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಲಘು ವಾಹನಗಳ ಮೂಲಕ ತೆರಳಲು ಅವಕಾಶ ಕಲ್ಪಿಸಲಾಗಿದೆ.

ಅಲ್ಲದೆ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವದರಿಂದ ಪ್ರವಾಸಿಗರು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸಲು ಕೋರಿದೆ.