ಗೋಣಿಕೊಪ್ಪ ವರದಿ, ಅ. 13 : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪೊನ್ನಂಪೇಟೆ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಅಯೋಜಿಸಿರುವ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.

ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯದ ವಿದ್ಯಾರ್ಥಿಗಳು ಬ್ಯಾಂಡ್ ಮೂಲಕ ಪಥಸಂಚಲನ ನಡೆಸಿದರು. ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಪಥಸಂಚಲನ ವಂದನೆ ಸ್ವೀಕಸಿದರು.

ಮೈಸೂರು, ಹಾಸನ, ಉಡುಪಿ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳ ಕ್ರೀಡಾಪಟುಗಳು ಪಥಸಂಚಲನದಲ್ಲಿ ಪಾಲ್ಗೊಂಡರು.

ಜಿಲ್ಲೆಗಳ ತಂಡದ ನಾಯಕರುಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭ ಜಿ. ಪಂ. ಸದಸ್ಯ ಅಚ್ಚಪಂಡ ಮಹೇಶ್, ತಾ. ಪಂ ಉಪಾಧ್ಯಕ್ಷ ನೆಲ್ಲೀರ ಚಲನ್, ಸದಸ್ಯೆ ಆಶಾ ಪೂಣಚ್ಚ, ಬಿಇಒ ಲೋಕೇಶ್, ಡಿವೈಎಸ್ಪಿ ನಾಗಪ್ಪ, ವೃತ್ತ ನಿರೀಕ್ಷಕ ದಿವಾಕರ್, ಕಾಲೇಜು ಆಡಳಿತ ಮಂಡಳಿ ಸಮಿತಿ ಉಪಾಧ್ಯಕ್ಷ ಮಂಡೆಚಂಡ ದಿನೇಶ್, ಪ್ರಾಂಶುಪಾಲ ಪಾರ್ವತಿ ಪಾಲ್ಗೊಂಡಿದ್ದರು.

ಭಾನುವಾರ ನಡೆಯಲಿರುವ ಕ್ರೀಡಾಕೂಟದಲ್ಲಿ ಮೈಸೂರು, ಹಾಸನ, ಉಡುಪಿ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು ತಂಡಗಳು ಸೆಣಸಾಟ ನಡೆಸಲಿವೆ.