ಕುಶಾಲನಗರ, ಅ. 13: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಹಾಗೂ ಕಾರ್ಮಿಕರ ಒಕ್ಕೂಟ ಮತ್ತು ಐನ್‍ಟಿಯುಸಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು. ನಿವೃತ ಲೋಕಾಯುಕ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಮತ್ತು ಐನ್‍ಟಿಯುಸಿ ರಾಜ್ಯ ಜಂಟಿ ಕಾರ್ಯದರ್ಶಿ ನಾಪಂಡ ಮುದ್ದಪ್ಪ ಅವರ ಸಮ್ಮುಖದಲ್ಲಿ ಕೊಡಗಿನ ನೆರೆ ಸಂತ್ರಸ್ತರಿಗಾಗಿ ಹಗಲು-ರಾತ್ರಿ ದುಡಿದ ನಮ್ಮ ಕೊಡಗು ತಂಡಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಿತು. ನಮ್ಮ ಕೊಡಗು ತಂಡದ ಸಂಚಾಲಕ ನೌಶಾದ್ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.