ಮಡಿಕೇರಿ, ಅ.15 : ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ತಾ. 18 ರಂದು ಆಯುಧ ಪೂಜೆ ಹಾಗೂ ತಾ. 19 ರಂದು ದಸರಾ ಕಾರ್ಯಕ್ರಮದ ಸಂಬಂಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ 1965ರ ಕಲಂ 21ರಲ್ಲಿ ದತ್ತವಾದ ಅಧಿಕಾರದಂತೆ ತಾ. 17 ರ ಮಧ್ಯರಾತ್ರಿಯಿಂದ ತಾ. 20ರ ಬೆಳಿಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ 10 ಕಿ.ಮಿ. ವ್ಯಾಪ್ತಿಯಲ್ಲಿ ಹಾಗೂ ತಾ. 18 ರ ಮಧ್ಯರಾತ್ರಿ 12 ಗಂಟೆಯಿಂದ ತಾ 20ರ ಬೆಳಿಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ಪಟ್ಟಣ ಹಾಗೂ ಗೋಣಿಕೊಪ್ಪದ 10 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ, ಬÁರ್ ಹಾಗೂ ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇದಿssಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.