ಮಡಿಕೇರಿ, ಅ. 15: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತಾ. 16 ರಂದು (ಇಂದು) ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಜನಸಂಪರ್ಕ ಸಭೆಯು ಕುಶಾಲನಗರ ನಾಡ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, 571201, ದೂರವಾಣಿ ಸಂಖ್ಯೆ 08272-222100 ನ್ನು ಸಂಪರ್ಕಿಸಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.