ಶನಿವಾರಸಂತೆ, ಅ. 22: ಸಮೀಪದ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿರಿಜನರಿಗೆ ರಾಜ್ಯ ಸರಕಾರ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ವತಿಯಿಂದ ಉಚಿತ ಆಹಾರ ಪದಾರ್ಥಗಳ ಕಿಟ್‍ಗಳನ್ನು ಅಂಗನವಾಡಿ ಕೇಂದ್ರದ ಮೂಲಕ ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ರಮೇಶ್, ಸದಸ್ಯ ಎಂ.ಆರ್. ತೀರ್ಥಕುಮಾರ್, ಅಂಗನವಾಡಿ ಕಾರ್ಯಕರ್ತೆಯರು, ಫಲಾನುಭವಿಗಳು ಹಾಜರಿದ್ದರು.