ಮಡಿಕೇರಿ, ಅ. 22: ಇತ್ತೀಚಿಗೆ ಸಂಭವಿಸಿದ ಪಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡು ಹಾಗೂ ಭಾಗಶಃ ಮನೆ ಹಾನಿಗೊಳಗಾದ ಮೊಗೇರ ಸಮುದಾಯದ 35 ಸಂತ್ರಸ್ತ ಕುಟುಂಬಗಳಿಗೆ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘದ ಸಹಕಾರದಿಂದ ಸಹಾಯಧನ ವಿತರಿಸಲಾಯಿತು.
ನಗರದ ದೇವರಾಜು ಅರಸು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇರೆಬೈಲ ಸಂತ್ರಸ್ತರಾದವರು ಯಾವದೇ ಕ್ಷಣದಲ್ಲೂ ಜೀವನೋತ್ಸಾಹವನ್ನು ಕಳೆದುಕೊಳ್ಳದೆ ಆತ್ಮಸ್ಥೈರ್ಯದಿಂದ ಹೊಸ ಬದುಕು ಕಟ್ಟಿಕೊಳ್ಳಬೇಕಿದೆ. ನೊಂದವರ ಜೊತೆಯಲ್ಲಿ ಸಂಘ ಇರಲಿದೆ ಎಂದು ಧೈರ್ಯ ತುಂಬಿದರು.
ಮಂಗಳೂರು ತಾಲೂಕು ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ ಕೊಂಜಾಡಿ ಮಾತನಾಡಿ ಪ್ರಕೃತಿ ವಿಕೋಪದಿಂದ ಬದುಕು ಮುಗಿಯಿತು ಎಂದು ತಿಳಿದುಕೊಳ್ಳುವದು ತಪ್ಪು. ಸರಕಾರ ಹಾಗೂ ಜಿಲ್ಲಾಡಳಿತ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲವೆಂದರು. ದಕ್ಷಿಣ ಕನ್ನಡ ಮೊಗೇರ ಸಂಘದ ಜಿಲ್ಲಾ ನಿರ್ದೇಶಕ ಡಾ. ಶಿವಪ್ರಸಾದ್ ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಮಾಜದಿಂದ ಮುಂದೆಯು ಹೆಚ್ಚಿನ ಸಹಕಾರ ನೀಡಲಾಗುವದು ಎಂದು ಮುಗಿಯಿತು ಎಂದು ತಿಳಿದುಕೊಳ್ಳುವದು ತಪ್ಪು. ಸರಕಾರ ಹಾಗೂ ಜಿಲ್ಲಾಡಳಿತ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲವೆಂದರು. ದಕ್ಷಿಣ ಕನ್ನಡ ಮೊಗೇರ ಸಂಘದ ಜಿಲ್ಲಾ ನಿರ್ದೇಶಕ ಡಾ. ಶಿವಪ್ರಸಾದ್ ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಮಾಜದಿಂದ ಮುಂದೆಯು ಹೆಚ್ಚಿನ ಸಹಕಾರ ನೀಡಲಾಗುವದು ಎಂದು ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಬಿ.ಶಿವಪ್ಪ ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘ ಸಹಾಯಧನÀ ನೀಡುವ ಮೂಲಕ ಸಂತ್ರಸ್ತರಲ್ಲಿ ಹೊಸ ಸ್ಫೂರ್ತಿಯನ್ನು ತುಂಬಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘದ ಉಪಾಧ್ಯಕ್ಷ ಮೋಹನ್ದಾಸ್, ಮಂಗಳೂರು ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಪಿ.ಬಿ. ಸುರೇಶ್, ಜಿಲ್ಲಾ ಉಪಧ್ಯಾಕ್ಷ ಸೋಮನಾಥ್, ವೀರಾಜಪೇಟೆ ತಾಲೂಕು ಗೌರವಧ್ಯಕ್ಷೆ ಅಕ್ಕಮ್ಮ ಮೂರ್ತಿ ಹಾಗೂ ಜಿಲ್ಲೆ, ತಾಲೂಕು ಮತ್ತು ಹೋಬಳಿ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಜಿ. ಚಂದ್ರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.