ಸುಂಟಿಕೊಪ್ಪ, ಅ. 22: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು ಇತ್ತೀಚೆಗೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಸಂಘಟನೆಗಳ ಕಾರ್ಯಕರ್ತರು ಮತ್ತು ಮಹಿಳೆಯರು ಅಯ್ಯಪ್ಪ ಭಕ್ತ ವೃಂದ ಸೋಮವಾರ ಗದ್ದೆಹಳ್ಳದಿಂದ ಸುಂಟಿಕೊಪ್ಪ ನಗರದವರೆಗೆ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.ಗದ್ದೆಹಳ್ಳದ ಗಾಂಧಿ ವೃತ್ತದಿಂದ ಸುಂಟಿಕೊಪ್ಪ, ಅ. 22: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು ಇತ್ತೀಚೆಗೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಸಂಘಟನೆಗಳ ಕಾರ್ಯಕರ್ತರು ಮತ್ತು ಮಹಿಳೆಯರು ಅಯ್ಯಪ್ಪ ಭಕ್ತ ವೃಂದ ಸೋಮವಾರ ಗದ್ದೆಹಳ್ಳದಿಂದ ಸುಂಟಿಕೊಪ್ಪ ನಗರದವರೆಗೆ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಗದ್ದೆಹಳ್ಳದ ಗಾಂಧಿ ವೃತ್ತದಿಂದ ಎಚ್ಚೆತ್ತುಕೊಂಡು ನ್ಯಾಯಾಲಯದ ಈ ತೀರ್ಪನ್ನು ಮರುಪರಿಶೀಲಿಸಲು ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದರು.

ನಂತರ ವಾಹನ ಚಾಲಕರ ಸಂಘದ ಕಚೇರಿಯ ವೇದಿಕೆಯ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿಯ ಧರ್ಮ ಜಾಗರಣಾ ಸಮನ್ವಯ ವಿಭಾಗ ದಕ್ಷಿಣ ಪ್ರಾಂತ್ಯದ ಪ್ರಮುಖ್ ದಿನಕರ್ ಮಾತನಾಡಿ, ಈ ಪ್ರತಿಭಟನೆ ಸುಪ್ರೀಂ ಕೊರ್ಟ್‍ನ ವಿರುಧ್ದ ಅಲ್ಲ ಕೇಂದ್ರ ಸರಕಾರಕ್ಕೆ ಕೇರಳ ಸರಕಾರ ಮೇಲ್ಮನವಿ ಸಲ್ಲಿಸುವ ಕೆಲಸ ಮಾಡದಿರುವದು ಸರಿಯಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಮತಾಂಧ ಶಕ್ತಿಗಳು ಧರ್ಮದ ಮೇಲೆ ತಮ್ಮ ವಕ್ರ ದೃಷ್ಟಿ ಬೀರಿ ನಮ್ಮನ್ನು ಒಡೆಯುವ ಸಂಚು ಮಾಡುತ್ತಿದೆ ಎಂದು ದೂರಿದರು.