ಮಡಿಕೇರಿ, ಅ.23: ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶ ಪ್ರೇಮ ಸ್ಮರಿಸುವಂತಾಗಬೇಕು ಎಂದು ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಅರಸು ಭವನದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮ ಸಂದರ್ಭದಲ್ಲಿ ರಾಷ್ಟ್ರಭಿಮಾನದಲ್ಲಿ ತೊಡಗಿಸಿಕೊಂಡಿದ್ದ ಧೀರ ಮಹಿಳೆ. ಸ್ವಾಭಿಮಾನ ಸಮಾಜಕ್ಕೆ ಕೈಜೋಡಿಸಿದ್ದ ದಿಟ್ಟ ಮಹಿಳೆ ಎಂದು ಅವರು ನುಡಿದರು. ನಗರಸಭೆ ಅಧ್ಯಕ್ಷೆÀ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಅವರು ತಮ್ಮ ಪ್ರಾಂತ್ಯದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡುವದರ ಜೊತೆಗೆ ನಾಡಿನ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದರು ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಧೈರ್ಯ, ಸ್ಥೈರ್ಯ ಹಾಗೂ ಸಾಹಸಕ್ಕೆ ಹೆಸರಾಗಿದ್ದರು ಎಂದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್ ಮಾತನಾಡಿ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಬೆಳಗುವ ಹೆಸರುಗಳಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರದು ಮುಂಚೂಣಿಯಲ್ಲಿದೆ. ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ 1857 ರಲ್ಲಿ ನಡೆದಿತ್ತು. ಅದಕ್ಕೂ 33 ವರ್ಷಗಳ ಮೊದಲೇ ನಾಡಿನ ಐತಿಹಾಸಿಕ ನೆಲ ಕಿತ್ತೂರಿನಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿತ್ತು ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಅವರು ಹುಟ್ಟಿದ ಊರು ಬೆಳಗಾವಿ ತಾಲೂಕಿನ ಕಾಕತಿ ಗ್ರಾಮ. ಬೆಳಗಾವಿ ಜಿಲ್ಲಾ ಕೇಂದ್ರದಿಂದ 6 ಕಿ.ಮೀ.ದೂರದಲ್ಲಿದೆ ಎಂದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ವೈ.ಚಿತ್ರಾ, ಜಿ.ಪಂ.ಸಹಾಯಕ ಕಾರ್ಯದರ್ಶಿ ಬಾಬು, ಶ್ರೀಕಂಠಮೂರ್ತಿ ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಸ್ವಾಗತಿಸಿದರು. ಮಂಜುನಾಥ್ ನಿರೂಪಿಸಿ, ವಂದಿಸಿದರು.