ಮಡಿಕೇರಿ, ಅ.23: ವಿದ್ಯಾರ್ಥಿ ಗಳು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳುವಂತಾಗಲು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪದವಿ ಪೂರ್ವ ಶಿಕ್ಷಣ ನಂತರದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಕವಿಗೋಷ್ಠಿಯನ್ನು ಜನವರಿ ತಿಂಗಳಲ್ಲಿ ಆಯೋಜಿಸಲಾಗುವದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆದ ನನ್ನ ಮೆಚ್ಚಿನ ಪುಸ್ತಕ, ಅಭಿಪ್ರಾಯ ಮಂಡನಾ ಸ್ಪರ್ಧೆ, ಕನ್ನಡ ಸಂಘ ಉದ್ಘಾಟನೆ ಮತ್ತು ಕಾಲೇಜು ವಾರ್ಷಿಕ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾಹಿತ್ಯವು ವಿವೇಕದ ವಿದ್ಯೆ ಬೆಳೆಸುತ್ತದೆ. ಪ್ರತಿಯೊಬ್ಬರೂ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ಸಾಹಿತ್ಯ, ಸಂಸ್ಕøತಿ ಬೆಳವಣಿಗೆಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸ ಲಾಗುತ್ತಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯ ಓದುವಂತಾಗ ಬೇಕು ಎಂದು ಹೇಳಿದರು.

ಕಾಲೇಜಿನ ‘ಸೃಷ್ಟಿ’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿದ ಸಾಹಿತಿ ಬಿ.ಆರ್.ಜೋಯಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು ಕಥೆ, ಕವನ, ಸಣ್ಣ ಕಥೆಗಳು ಬರೆಯುವ ಅಭ್ಯಾಸ ಬೆಳೆಸಿಕೊಳ್ಳುವಂತಾಗಬೇಕು. ಸಾಹಿತ್ಯ ಓದುವದರಿಂದ ಹೆಚ್ಚಿನ ಜ್ಞಾನಾರ್ಜನೆ ಜೊತೆಗೆ ಭಾಷಾ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಉಚ್ಚರಣೆಯಲ್ಲಿ ಕೊಂಚ ವ್ಯತ್ಯಾಸವಾದರೂ ಅಬಾ¸ Àವಾಗುತ್ತದೆ. ಸರಿಯಾದ ರೀತಿಯಲ್ಲಿ ಉಚ್ಚರಿಸ ಬೇಕೆಂದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಜಾಣೆ ಜಾಣೆಯರ ಬಳಗದ ಸಂಚಾಲಕರಾದ ಡಾ.ಕೋರನ ಸರಸ್ವತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಾಹಿತ್ಯ ಸಮಾಜದ ಪ್ರತಿಬಿಂಭವಾಗಿದೆ. ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವಲ್ಲಿ ಸಾಹಿತ್ಯ ಅತ್ಯಗತ್ಯ ಎಂದು ಹೇಳಿದರು. ಜಿಲ್ಲಾ ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ, ಒಮ್ಮೊಮ್ಮೆ ಇಂಗ್ಲೀಷ್ ಸುಲಭವೆನಿಸುತ್ತದೆ. ಕನ್ನಡದಲ್ಲಿ ಒತ್ತಕ್ಷರಗಳು, ಅಲ್ಪಪ್ರಾಣ, ಮಹಾಪ್ರಾಣಗಳ ಬಳಕೆ ತಪ್ಪಾದರೆ ಅರ್ಥ ಕೆಡುತ್ತದೆ ಎಂದು ತಮ್ಮ ವೃತ್ತಿ ಯಲ್ಲಿನ ಅನುಭವ ಹಂಚಿಕೊಂಡರು.

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷÀ ಕುಡೆಕಲ್ ಸಂತೋಷ್ ಮಾತನಾಡಿ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳು ವಂತಾಗಬೇಕು. ಇಂತಹ ಕಾರ್ಯಕ್ರಮಗಳು ಚಟುವಟಿಕೆಗಳಿಗೆ ವೇದಿಕೆಯಾಗಲಿದೆ. ವಿದ್ಯಾರ್ಥಿಗಳಲ್ಲಿ ಗ್ರಹಿಸುವ ಶಕ್ತಿ ಇರಬೇಕೆಂದರು. ಇದೇ ಸಂದರ್ಭ ನನ್ನ ಮೆಚ್ಚಿನ ಪುಸ್ತಕ ವಿಷಯದಡಿ ಅಭಿಪ್ರಾಯ ಮಂಡಿಸಿದ 7 ಮಂದಿ ವಿದ್ಯಾರ್ಥಿ ಗಳಿಗೆ ಬಹುಮಾನ ನೀಡಲಾಯಿತು. ಪ್ರಥಮ ಬಿಎ ವಿದ್ಯಾರ್ಥಿನಿಯರು ಕನ್ನಡ ಗೀತೆ ಹಾಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ.ಜೆನಿಫರ್ ಲೋಲಿಟ, ಪ್ರಾಧ್ಯಾಪಕಿ ನಿರ್ಮಲ ಅವರು ಮಾತನಾಡಿದರು. ರೇಷ್ಮ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕಿ ಕನ್ನಿಕಾ ಸ್ವಾಗತಿಸಿದರು.