ಮಡಿಕೇರಿ, ಅ. 23: ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕವು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೋಬಳಿ ವ್ಯಾಪ್ತಿಗೆ ಒಳಪಡುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನ. 1 ರಂದು ಕನ್ನಡ ಭಾಷಣ ಸ್ಫರ್ಧೆಯನ್ನು ಆಯೋಜಿಸಿದೆ.
‘ಕನ್ನಡದ ಉಳಿವು ಹೇಗೆ ಸಾಧ್ಯ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆ ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು, ಮರಗೋಡಿನಲ್ಲಿ ಪೂರ್ವಾಹ್ನ 10 ಗಂಟೆಗೆ ನಡೆಯಲಿದ್ದು, 8 ನಿಮಿಷಗಳ ಕಾಲಾವಕಾಶ ನೀಡಲಾಗಿದೆ.
ಒಂದು ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶವಿದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ಹಾಗೂ ಪಾಲ್ಗೊಳ್ಳುವ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನವನ್ನು ನೀಡಲಾಗುವದು.
ಹೆಚ್ಚಿನ ಮಾಹಿತಿಗಾಗಿ ಕ.ಸಾ. ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಪಿ.ಪಿ. ಸುಕುಮಾರ್ 94481213920 ಸಂಖ್ಯೆಯಲ್ಲಿ ಸಂಪರ್ಕಿಸ ಬಹುದಾಗಿದೆ.