*ಸಿದ್ದಾಪುರ, ಅ. 24: ಅಕ್ರಮವಾಗಿ ಟಿಪ್ಪರ್ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಚೆಟ್ಟಳ್ಳಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪರವಾನಗಿ ಇಲ್ಲದೇ ಮರಳನ್ನು ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಚೆಟ್ಟಳ್ಳಿ ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣವನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಆರೋಪಿ ನೆಲ್ಯಹುದಿಕೇರಿಯ ರಜಾಕ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಚೇತನ್ ತಿಳಿಸಿದ್ದಾರೆ.