ವೀರಾಜಪೇಟೆ, ಅ. 25: ತಾ.28ರಂದು ನಡೆಯಲಿರುವ ಪಟ್ಟಣ ಪಂಚಾಯಿತಿಯ ಚುನಾವಣೆಯ ಪೂರ್ವ ಸಿದ್ಧತೆಯನ್ನು ಇಂದು ಜಿಲ್ಲಾಧಿಕಾರಿ ಶ್ರೀ ವಿದ್ಯಾ ಪರಿಶೀಲಿಸಿದರು.

ವೀರಾಜಪೇಟೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆಗಳ ವ್ಯವಸ್ಥೆ ಕುರಿತು ತಾಲೂಕು ಸಹಾಯಕ ಚುನಾವಣಾಧಿಕಾರಿ ಆರ್.ಗೋವಿಂದರಾಜು ಅವರೊಂದಿಗೆ ಚರ್ಚಿಸಿದರು.

ಮತಗಟ್ಟೆಗಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಯೊಂದಿಗೆ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಶ್ರೀಧರ್, ಅಭಿಯಂತರ ಎನ್.ಪಿ. ಹೇಮ್‍ಕುಮಾರ್ ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.