ಮಡಿಕೇರಿ, ಅ. 25: ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳ ಚುನಾವಣೆಗೆ ಸಂಬಂಧಿಸಿದಂತೆ ತಾ.26ರಂದು (ಇಂದು) ಬೆಳಿಗ್ಗೆ 7ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿದರು. ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕವೂ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು, ಅವರ ಬೆಂಬಲಿಗರು ಪ್ರಚಾರ ಕಾರ್ಯ ಕೈಗೊಂಡರೆ,ಸಾರ್ವಜನಿಕ ಸಭೆ ಸಮಾರಂಭ ನಡೆಸಿದರೆ,ಮಾಧ್ಯಮಗಳ ಮೂಲಕ ಮೊಬೈಲ್ ಮೂಲಕ ಪ್ರಚಾರ ಮಾಡಿದರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವ ದೆಂದರು. ಚುನಾವಣೆ ದಿನದಂದು ಕೂಡ ಮತದಾನ ಕೇಂದ್ರಗಳಲ್ಲಿ ಹಾಗೂ ಮತ ಕೇಂದ್ರದಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಮತ ಪ್ರಚಾರ, ಮತದಾರರ ಓಲೈಕೆ ಮಾಡುವದು, ಚುನಾವಣೆ ಸಂಬಂಧ ಚಿಹ್ನೆ ಪ್ರದರ್ಶನ ಮಾಡುವದು ಕೂಡ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆಯಿತ್ತರು. ತಾ.27 ರಂದು (ನಾಳೆ) ಸೋಮವಾರಪೇಟೆ ಕುಶಾಲನಗರ ಪಟ್ಟಣ ಪಂಚಾಯ್ತಿಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪದವಿ ಪೂರ್ವ ಕಾಲೇಜು ಹಾಗೂ ವೀರಾಜಪೇಟೆ ಪಂಚಾಯ್ತಿಗೆ ಸಂಬಂಧಿಸಿದಂತೆ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಲಿದೆ ಎಂದರು.ಇದೇ ಮೊದಲ ಬಾರಿಗೆ ಮತದಾರರ ಚೀಟಿಯನ್ನು ಬೂತ್ ಮಟ್ಟದ ಅಧಿಕಾರಿಯಿಂದ ವಿತರಿಸಲಾಗುತ್ತಿದ್ದು ಇದನ್ನು ಹಾಜರು ಪಡಿಸಿ ಮತದಾನ ಮಾಡಬಹುದಾಗಿದೆ.

ಇನ್ನುಳಿದಂತೆ ಪಾಸ್‍ಪೋರ್ಟ್ ಡ್ರೈವಿಂಗ್ ಲೈಸನ್ಸ್, ಆದಾಯ ತೆರಿಗೆ ಗುರುತಿನ ಚೀಟಿ (Pಂಓ) ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಓದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸಾರ್ವಜನಿಕ ವಲಯದ ಬ್ಯಾಂಕ್, ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ. ಮಾನ್ಯತೆ ಪಡೆದ ನೋಂದಾಯಿತ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿಗಳು, ಭಾವಚಿತ್ರವಿರುವ ನೋಂದಾಯಿತ ಡೀಡ್‍ಗಳು, ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು, ಭಾವಚಿತ್ರವಿರುವ ಪಡಿತರ ಚೀಟಿಗಳು (ಖಚಿಣioಟಿ ಅಚಿಡಿಜ) ಸಕ್ಷಮ ಪ್ರಾಧಿಕಾರ ನೀಡಿರುವ Sಅ/Sಖಿ/ಔಃಅ ಭಾವಚಿತ್ರವಿರುವ ಪ್ರಮಾಣ ಪತ್ರಗಳು.

ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ, ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದಾಪ್ಯ ವೇತನ ಆದೇಶಗಳು, ವಿಧವ ವೇತನ ಆದೇಶಗಳು, ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಗಿ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳು, ಮಾಜಿ ಯೋಧರ ಭಾವಚಿತ್ರವಿರುವ ಸಿಎಸ್‍ಡಿ ಕ್ಯಾಂಟೀನ್ ಕಾರ್ಡ್, ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, ಎನ್‍ಆರ್‍ಇಜಿ ಯೋಜನೆಯ ಅಡಿಯಲ್ಲಿ ನೀಡಿರುವ ಭಾವಚಿತ್ರವಿರುವ ಉದ್ಯೋಗ ಕಾರ್ಡ್, ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಗ್ರಾಮಪಂಚಾಯಿತಿಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು.

ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡಿರುವ ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರ ಇರುವ ತಾತ್ಕಾಲಿಕ, ಮೂಲ ಪಡಿತರ ಚೀಟಿ, ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್‍ಗಳು (ಕಾರ್ಮಿಕ ಮಂತ್ರಾಲಯ ಯೋಜನೆ), ಆಧಾರ್ ಕಾರ್ಡ್ ಇವುಗಳಲ್ಲಿ ಯಾವದಾದರೂ ಒಂದನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದರು.

10 ಸೂಕ್ಷ್ಮ ಮತಗಟ್ಟೆಗಳು

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 3, ಕುಶಾಲನಗರ ಪಟ್ಟಣ ಪಂಚಾಯಿತಿಯ 4, ವೀರಾಜಪೇಟೆ ಪಟ್ಟಣ ಪಂಚಾಯಿತಿಯ 3 ಮತಗಟ್ಟೆಗಳು ಸೇರಿ ಒಟ್ಟು 10 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗಿದೆ. ಸೋಮವಾರಪೇಟೆಯ 2, ಕುಶಾಲನಗದ 3 ಹಾಗೂ ವೀರಾಜಪೇಟೆಯ 2 ಸೇರಿ ಒಟ್ಟು 7 ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನಾವಣೆಗಾಗಿ ಸೋಮವಾರಪೇಟೆ ತಾಲೂಕಿಗೆ 9 ಜೀಪು, 1 ಮಿನಿ ಬಸ್ ಹಾಗೂ ವೀರಾಜಪೇಟೆಗೆ 10 ಜೀಪು ಹಾಗೂ 3 ಮಿನಿ ಬಸ್‍ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.