ಮಡಿಕೇರಿ, ಅ. 24: ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯಾಚರಣೆ ತಾ. 25 ರಂದು (ಇಂದು) ನಡೆಯಲಿದೆ. ಕಟ್ಟಡವನ್ನು ಸಂಪೂರ್ಣ ನೆಲಸಮಗೊಳಿಸಿ ಹಿಂಬದಿಯ ಬರೆಗೆ ತಡೆಗೋಡೆ ನಿರ್ಮಿಸಿ ಮುಂದಿನ ದಿನಗಳಲ್ಲಿ ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡುವ ಚಿಂತನೆ ಇದೆ ಎಂದು ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಣ್ಣಿಕೃಷ್ಣ ತಿಳಿಸಿದ್ದಾರೆ.