ಮಡಿಕೇರಿ, ಅ. 24: ಕೇಂದ್ರ ಲೋಕಸಭಾ ಸಚಿವಾಲಯದ ಗ್ರಾಮೀಣ ಅಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ತಂಡವು ತಾ, 25 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಧ್ಯಾಹ್ನ 3.15ಕ್ಕೆ ತಿತಿಮತಿಗೆ ಭೇಟಿ ನೀಡಲಿದೆ. ಬಳಿಕ ಸಂಜೆ 4 ಗಂಟೆಗೆ ಪಾಲಿಬೆಟ್ಟ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳು, ಘನ ತ್ಯಾಜ್ಯ ವಿಲೇವಾರಿ ಮತ್ತಿತರ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.