ನಾಪೆÇೀಕ್ಲು, ಅ. 24: ಮೈಸೂರು ದಸರಾ ಮಹೋತ್ಸವ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ದಸರಾ ಕ್ರೀಡಾ ಉಪ ಸಮಿತಿ ವತಿಯಿಂದ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಹಾಗೂ ಧೀರಜ್ ಕಾರ್ಯಪ್ಪ ಪ್ರಶಸ್ತಿ ಪಡೆದಿರುತ್ತಾರೆ.
ಇವರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಸೆನ್ಸಾಯ್ ಮತ್ತು ರಾಷ್ಟ್ರಮಟ್ಟದ ರೆಫ್ರಿ ನಾಗೇಂದ್ರಪ್ಪ ಅವರಿಂದ ತರಬೇತಿ ಪಡೆದಿರುತ್ತಾರೆ.