ಮಡಿಕೇರಿ ಅ. 24: ಇತ್ತೀಚಿಗೆ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಉಂಟಾಗಿರುವ ಬೆಳೆ ಮತ್ತು ಭೂ ನಷ್ಟಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳದಿದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ ಎಂದು ಕೊಡಗು ಪ್ರಾಕೃತಿಕ ವಿಕೋಪ ಮತ್ತು ನೆರೆ ಸಂತ್ರಸ್ತರ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ ಹಾಗೂ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ಸಮಿತಿಯ ಅಧ್ಯಕ್ಷ ಮಂಡೇಪಂಡ ಮನುಮೇದಪ್ಪ, ಇತ್ತೀಚೆಗೆ ಮುಖ್ಯಮಂತ್ರಿಗಳು ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ ಕುರಿತು ಭರವಸೆ ನೀಡಿದ್ದು, ಇದನ್ನು ಸ್ವಾಗತಿಸುವದಾಗಿ ತಿಳಿಸಿದರು. ಸಮಿತಿ ಸಲ್ಲಿಸಿರುವ ಮನವಿ ಪತ್ರಕ್ಕೆ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಮಡಿಕೇರಿ ಅ. 24: ಇತ್ತೀಚಿಗೆ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಉಂಟಾಗಿರುವ ಬೆಳೆ ಮತ್ತು ಭೂ ನಷ್ಟಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳದಿದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ ಎಂದು ಕೊಡಗು ಪ್ರಾಕೃತಿಕ ವಿಕೋಪ ಮತ್ತು ನೆರೆ ಸಂತ್ರಸ್ತರ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ ಹಾಗೂ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ಸಮಿತಿಯ ಅಧ್ಯಕ್ಷ ಮಂಡೇಪಂಡ ಮನುಮೇದಪ್ಪ, ಇತ್ತೀಚೆಗೆ ಮುಖ್ಯಮಂತ್ರಿಗಳು ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ ಕುರಿತು ಭರವಸೆ ನೀಡಿದ್ದು, ಇದನ್ನು ಸ್ವಾಗತಿಸುವದಾಗಿ ತಿಳಿಸಿದರು. ಸಮಿತಿ ಸಲ್ಲಿಸಿರುವ ಮನವಿ ಪತ್ರಕ್ಕೆ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಸಂಬಂಧಿಸಿದಂತೆ ಯಾವದೇ ಪರಿಹಾರ ಘೋಷಣೆಯಾಗಿಲ್ಲ. ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ತಪ್ಪಿದಲ್ಲಿ ಸಮಿತಿ ವತಿಯಿಂದ ಮುಂದಿನ ಹೋರಾಟದ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಬೆಳೆಗಾರರ ಒಕ್ಕೂಟದ ವಕ್ತಾರ ಕೆ.ಕೆ.ವಿಶ್ವನಾಥ್ ಮಾತನಾಡಿ, ಜುಲೈ ತಿಂಗಳಿನಲ್ಲಿ ಬೆಳೆ ನಷ್ಟದ ಕುರಿತು ಕೇಂದ್ರ ವಾಣಿಜ್ಯ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಆದರೆ ಆಗಸ್ಟ್ 15ರ ನಂತರ ಬೆಳೆಗಾರರ ಭೂಮಿಯೇ ಕಳೆದುಹೋಯಿತು. ಆದ್ದರಿಂದ ಭೂಮಿಯನ್ನು ಕಳೆದುಕೊಂಡ ಎಲ್ಲಾ ಬೆಳೆಗಾರರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಂಟಿ ಟಾಸ್ಕ್‍ಫೋರ್ಸ್ ರಚನೆ ಮತ್ತು ಶೇ. 50ರಷ್ಟು ಬೆಳೆನಷ್ಟ ಪರಿಹಾರ ನೀಡುವ ಕುರಿತು ಈಗಾಗಲೇ ಭರವಸೆ ದೊರೆತಿದೆ. ಆದರೆ ಪರಿಹಾರ ಘೋಷಣೆ ಆಗದೇ ಇರುವದರಿಂದ ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದರು.
ಕಾಫಿ ಮಂಡಳಿ ನಡೆಸಿರುವ ನಷ್ಟದ ಸಮೀಕ್ಷೆ ತೃಪ್ತಿಕರವಾಗಿಲ್ಲ, ಶೇ. 50ಕ್ಕೂ ಅಧಿಕ ಪ್ರಮಾಣದ ಬೆಳೆ ನಷ್ಟವಾಗಿದ್ದರೂ ಕೇವಲ 30 ರಿಂದ 35 ರಷ್ಟು ಬೆಳೆ ನಷ್ಟವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ತೋಟ ಗಾರಿಕಾ ಇಲಾಖೆ, ಎನ್‍ಡಿಆರ್‍ಎಫ್ ಮತ್ತು ಕಾಫಿ ಮಂಡಳಿ ವಿಭಿನ್ನ ರೀತಿಯಲ್ಲಿ ಅಧ್ಯಯನ ವರದಿಯನ್ನು ನೀಡಿವೆ ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.
ಹಾರಂಗಿಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಬೇಕು ಮತ್ತು ಮಳೆಹಾನಿಯಿಂದ ಬಿದ್ದಿರುವ ಮರಗಳನ್ನು ತೆರವುಗೊಳಿಸಲು ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದರು.
ಒಕ್ಕೂಟದ ಉಪಾಧ್ಯಕ್ಷ ನಂದಾಬೆಳ್ಯಪ್ಪ ಮಾತನಾಡಿ, ಟಾಸ್ಕ್‍ಫೋರ್ಸ್ ರಚನೆಯಿಂದ ಮಾತ್ರ ಬೆಳೆಗಾರರ ಸಮಸ್ಯೆಗೆ ಪರಿಹಾರ ದೊರೆಯಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರ ಸಮಿತಿಯ ಸದಸ್ಯರುಗಳಾದ ಬಿ.ಎನ್. ರಮೇಶ್, ಜಯಾ ಚಿಣ್ಣಪ್ಪ ಹಾಗೂ ಎಂ.ಸಿ. ಕಾರ್ಯಪ್ಪ ಉಪಸ್ಥಿತರಿದ್ದರು.