ಗೋಣಿಕೊಪ್ಪ ವರದಿ, ಅ. 24: ಪೊನ್ನಂಪೇಟೆ ಸಾಯಿ ಶಂಕರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಪ್ರಕೃತಿ ವಿಕೋಪದ ಸಂತೃಸ್ತರ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ಪ್ರೇಮಿಗಳಿಂದ ನೆರವು ನೀಡಲಾಯಿತು.

ಶಿಕ್ಷಣ ಪ್ರೇಮಿ ಕಾಟಿಮಾಡ ಜಿಮ್ಮಿ ಅಣ್ಣಯ್ಯ ರೂ. 25 ಸಾವಿರ, ಪೊನ್ನಂಪೇಟೆ ನಾಗರಿಕ ವೇದಿಕೆಯ ಅಧ್ಯಕ್ಷ ಪೊಕ್ಕಳಿಚಂಡ ಪೂಣಚ್ಚ ಅವರು ಕೂಡ ವೇದಿಕೆಯಿಂದ ರೂ. 5 ಸಾವಿರ ಸಹಾಯಧನ ನೀಡಿ ನೆರವಾದರು.

ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ರುವ ಸಂತ್ರಸ್ತರ 130 ವಿದ್ಯಾರ್ಥಿಗಳಿಗೆ ನೆರವಾಗುವಂತೆ ವಿದ್ಯಾಸಂಸ್ಥೆ ಅಧ್ಯಕ್ಷ ಕೋಳೆರ ಝರು ಗಣಪತಿ ಅವರಿಗೆ ಮೊತ್ತವನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ ಉಪಸ್ಥಿತರಿದ್ದರು.