ಮಡಿಕೇರಿ, ಅ. 26: ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 27 ರಂದು (ಇಂದು) ಸೋಮವಾರಪೇಟೆ ತಾಲೂಕು ಕಚೇರಿ, ತಾ. 29 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಹಾಗೂ ತಾ. 30 ರಂದು ಮಡಿಕೇರಿಯ ಗೌಳಿಬೀದಿ ಲೋಕಾಯುಕ್ತ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆವರೆಗೆ ದೂರು ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ (08272-220797) ಇಲ್ಲಿ ಸಂಪರ್ಕಿಸಬಹುದು.