ಕುಶಾಲನಗರ, ಅ. 26: ಕುಶಾಲನಗರ ಪ.ಪಂ. ಚುನಾವಣೆಯ ಹಿನೆÀ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮತ್ತು ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಮತಯಾಚನೆ ನಡೆಸಿದರು. ಪಕ್ಷದ ಕಾರ್ಯಕರ್ತರು, ಅಭ್ಯರ್ಥಿಗಳೊಂದಿಗೆ ಪಟ್ಟಣದ ವಿವಿಧ ಬಡಾವಣೆಗಳಿಗೆ ತೆರಳಿದ ಅವರು ಮತಯಾಚನೆ ಮಾಡಿದರು.

ಈ ಸಂದರ್ಭ ಮಾತನಾಡಿದ ವೀಣಾ ಅಚ್ಚಯ್ಯ, ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪದ ಸಂದರ್ಭ ರಾಜ್ಯದ ಸಮ್ಮಿಶ್ರ ಸರಕಾರ ಸೂಕ್ತವಾಗಿ ಸ್ಪಂದಿಸಿ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಿದೆ. ಇದು ಜನರ ಮನದಲ್ಲಿ ನೆಲೆನಿಂತಿದ್ದು ಕಾಂಗ್ರೆಸ್ ಪರ ಒಲವು ತೋರಿದ್ದಾರೆ ಎಂದರು. ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ಪ.ಪಂ. ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ. ಕುಶಾಲನಗರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಾಗುತ್ತಿದೆ. ಮೂರು ಕಡೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿ.ಪಂ. ಸದಸ್ಯೆ ಚಂದ್ರಕಲಾ, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮತ್ತಿತರರು ಇದ್ದರು.