ಮಡಿಕೇರಿ, ಅ. 27: ಕೊಡಗು ಸುನ್ನಿ ವೆಲ್ಫೇರ್ ಅಸೋಷಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ ಮಿಲಾದ್ ಸಮಾವೇಶ ನವೆಂಬರ್ 23 ರಂದು ಸಂಜೆ ದುಬೈ ದೇರಾದಲ್ಲಿರುವ ಪರ್ಲ್ ಕ್ರೀಕ್ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ. ಪ್ರಮುಖ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ನಾಯಕರು ಭಾಗವಹಿಸುವ ಕಾರ್ಯಕ್ರಮದ ಯಶಸ್ವಿಗೆ ಸ್ವಾಗತ ಸಮಿತಿ ರಚನಾ ಸಭೆ ನಡೆಯಿತು. ರಾಜ್ಯ ಎಸ್.ಎಸ್.ಎಫ್. ಅಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಸಭೆಯನ್ನು ಉದ್ಘಾಟಿಸಿದರು. ಕೊಡಗು ಸುನ್ನಿ ವೆಲ್ಫೇರ್ ಯುಎಇ ಸಮಿತಿ ಅಧ್ಯಕ್ಷ ಅಬೂಬಕರ್ ಹಾಜಿ ಕೊಟ್ಟಮುಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಜಲೀಲ್ ನಿಝಾಮಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಈ ಸಂದರ್ಭ ಸಲಹಾ ಸಮಿತಿ, ಹಣಕಾಸು ಸಮಿತಿ, ಆಹಾರ, ಮಕ್ಕಳ ಕಾರ್ಯಕ್ರಮ ಮುಂತಾದ ಉಪ ಸಮಿತಿಗಳನ್ನು ರಚಿಸಲಾಯಿತು.