ಮಡಿಕೇರಿ, ಅ. 27: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವು ತಾ. 28 ರಂದು (ಇಂದು) ಬೆಳಿಗ್ಗೆ 9.30 ಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. 16 ವರ್ಷ ವಯಸ್ಸಿನ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ 100 ಮೀ ಓಟ, 14 ವರ್ಷ ವಯಸ್ಸಿನ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ 400 ಮೀ ಓಟ, 16 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 40 ವರ್ಷ ಒಳಪಟ್ಟ ವಯಸ್ಸಿನ ಪುರುಷ ಮತ್ತು ಮಹಿಳೆಯರಿಗೆ 800 ಮೀ ಓಟ ಹಾಗೂ 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಗುಂಡು ಎಸೆತ ಕ್ರೀಡಾಕೂಟ ಏರ್ಪಡಿಸಲಾಗಿದೆ. ವಯಸ್ಸಿನ ಬಗ್ಗೆ ದಾಖಲೆ ಪ್ರಮಾಣ ಪತ್ರ ಹೊಂದಿರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.