ಮಡಿಕೇರಿ, ಅ. 27: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 29 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗಮೇಳದಲ್ಲಿ ಯುರೇಖಾ ಫೋಬ್ರ್ಸ್, ಆಲ್ಫಾ ಟೆಕ್ನಾಲಜಿಸ್, ಹಿಂದುಜ ಗ್ಲೋಬಲ್ ಸೊಲೂಷನ್ಸ್, ಲಾಲಿ ಪೆಟಲ್ಸ್, ಹಿಮತ್‍ಸಿಂಗ್ಕಾ ಮತ್ತು ಹೊಟೇಲ್ ಲಿ ಕೂರ್ಗ್ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಯು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ ಹಾಗೂ ಸ್ವ ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.